ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ ಶಿವಮೊಗ್ಗ:
ಪಂಚಮಸಾಲಿ ಸಮಾಜವನ್ನು ಸೆಪ್ಟಂಬರ್ 15 ರೊಳಗೆ ರಾಜ್ಯದಲ್ಲಿ 2ಎ ಗೆ ಸೇರಿಸುವ ಭರವಸೆಯನ್ನು ನಿಕಟಪೂರ್ವ ಮುಖ್ಯ ಮಂತ್ರಿ ಯಡಿಯೂರಪ್ಪ ನೀಡಿದ್ದು, ಆ ಗಡುವು ಸಮೀಪಿಸುತ್ತಿರುವುದರಿಂದ ರಾಜ್ಯ ಸರಕಾರ ಕೂಡಲೇ ಕಾರ್ಯಪ್ರವೃತ್ತವಾಗುವಂತೆ ಪಂಚಮಸಾಲಿ ಗುರುಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 2ಎಗೆ ಹಾಗೂ ರಾಷ್ಟ್ರದಲ್ಲಿ ಹಿಂದುಳಿದ ವರ್ಗಕ್ಕೆ ಮಾನ್ಯತೆ ನೀಡಬೇಕೆಂದು ವಿವಿಧ ಹಂತದಲ್ಲಿ ಹೋರಾಟ ನಡೆಸಿಕೊಂಡು ಬರಲಾಗಿದೆ. ಫ್ರೀಡಮ್ ಪಾರ್ಕ್ ನಲ್ಲಿ ನಡೆಸಿದ ಧರಣಿ ಸಂದರ್ಭದಲ್ಲಿ ಅಂದಿನ ಸಿಎಂ ಭರವಸೆ ನೀಡಿದ ಮೇರೆಗೆ ಧರಣಿ ಹಿಂದೆ ಪಡೆಯಲಾಗಿತ್ತು ಎಂದರು.
ಗಡುವು ಸಮೀಪಿಸುತ್ತಿರುವುದರಿಂದ ಸರ್ಕಾರ ಎಚ್ಚರಿಸುವ ಸಲುವಾಗಿ ಆ.22 ರಿಂದ ಮಲೆಮಹಾದೇಶ್ವರದಿಂದ ಅಭಿಯಾನ ನಡೆಸಲಾಗುತ್ತಿದೆ.ಎಲ್ಲಾ ಜಿಲ್ಲೆಗಳಲ್ಲಿಯೂ ಅಭಿಯಾನ ಮಾಡಲಾಗುತ್ತದೆ ಎಂದರು.
ಸೆಪ್ಟೆಂಬರ್ 15 ರೊಳಗೆ ಸರ್ಕಾರ ಆದೇಶ ಹೊರಡಿಸದಿದ್ದರೆ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಮುಂದುವರೆಸಲಾಗುತ್ತದೆ. ಸಾಮಾಜಿಕ ನ್ಯಾಯ ಸಿಕ್ಕುವವರೆಗೆ ಹೋರಾಟ ನಡೆಯಲಿದೆ ಎಂದರು.