Thursday, June 30, 2022

Latest Posts

ರಾಷ್ಟ್ರ ರಾಜಧಾನಿಯಲ್ಲಿ ಆಕ್ಸಿಜನ್​ ಹಾಹಾಕಾರ: ಪ್ರಾಣವಾಯು ಸಿಗದೇ ವೈದ್ಯ ಸಹಿತ 8 ಸೋಂಕಿತರ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಕ್ಸಿಜನ್​ ಹಾಹಾಕಾರ ಮುಂದುವರೆದಿದ್ದು, ಆಕ್ಸಿಜನ್ ಕೊರತೆಯಾದ ಹಿನ್ನೆಲೆ 8 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ 6 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಬ್ಬರು ಹೊರಗಡೆ ಬೆಡ್ ಮೇಲೆ ಚಿಕಿತ್ಸೆ ಪಡೆಯುತ್ತಿದ್ದರು.  8 ಜನರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯರೇ ನಿಧನ ಹೊಂದಿದ್ದಾರೆ .
ಬೆಳಿಗ್ಗೆಯಿಂದ ಆಕ್ಸಿಜನ್ ಕೊರತೆ ಬಗ್ಗೆ ಸಿಎಂ ಆಸ್ಪತ್ರೆ ಸರ್ಕಾರಕ್ಕೆ ಮಾಹಿತಿ ನೀಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಆಕ್ಸಿಜನ್ ಕೊರತೆಯ ಬಗ್ಗೆ ಹೇಳಿಕೊಂಡಿದ್ದರು. ಅಷ್ಟೇ ಅಲ್ಲದೇ ಕೇಂದ್ರ ಸರ್ಕಾರಕ್ಕೂ ಪತ್ರ ಬರೆದಿದ್ದರು ಎನ್ನಲಾಗಿದೆ. ಇನ್ನು ಘಟನೆ ನಡೆದ ಬೆನ್ನಿಗೇ ದೆಹಲಿಗೆ 490 ಮೆಟ್ರಿಕ್ ಟನ್​ನಿಂದ 590 ಮೆಟ್ರಿಕ್ ಟನ್ ಆಕ್ಸಿಜನ್ ನೀಡಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss