ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸ ದಿಗಂತ ವರದಿ, ಚಿಕ್ಕಮಗಳೂರು:
ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಗರದ ಕೋಟೆ ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಪತಿ ಹರೀಶ್ ಎಂಬುವವರನ್ನು ನಗರದ ಖಾಸಗಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.
ಹರೀಶ್ ಸಾವಿನ ವಿಚಾರವನ್ನು ಅವರ ಪುತ್ರ ದೂರವಾಣಿ ಮೂಲಕ ತಿಳಿಸುತ್ತಿದ್ದಂತೆ ಅಘಾತಕ್ಕೊಳಗಾದ ಅವರ ಪತ್ನಿ ಸೌಮ್ಯ ಸಹ ಸಾವಿಗೀಡಾಗಿದ್ದಾರೆ. ದಂಪತಿಗಳ ಸಾವಿನಿಂದಾಗಿ ಮಕ್ಕಳು, ಬಂಧುಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಸಾವಿನಲ್ಲೂ ಸತಿಪತಿಗಳು ಒಂದಾಗಿದ್ದು, ಜನರು ಮರುಕ ವ್ಯಕ್ತಪಡಿಸಿದ್ದಾರೆ.
ಮೃತ ದಂಪತಿಗಳಲ್ಲಿ ಕೊರೋನಾ ಸೋಂಕು ಇರಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.