Wednesday, August 10, 2022

Latest Posts

ಕನ್ನಡಿಗರ ಕಣ್ಮಣಿ ಪುನೀತ್ ನಿಧನ: ಕಂಬನಿ ಮಿಡಿದ ರಾಜಕೀಯ ಗಣ್ಯರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
‘ಕನ್ನಡ ಚಿತ್ರರಂಗದ ಖ್ಯಾತ ನಟ, ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ನಿಧನ ಕರ್ನಾಟಕ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಸದ್ಗತಿ. ಅವರ ಕುಟುಂಬಕ್ಕೆ, ಆಪ್ತರಿಗೆ, ಪ್ರತಿ ಕನ್ನಡಿಗರಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್‌ ಮಾಡಿದ್ದಾರೆ.

‘ನಾಡಿನ ಜನಪ್ರಿಯ ಕಲಾವಿದ,ಡಾ.ರಾಜ್ ವಂಶದ ಕುಡಿ ಪುನೀತ್ ರಾಜಕುಮಾರ್ ಹಠಾತ್ ನಿಧನರಾದ ವಿಷಯ ದಿಗ್ಭ್ರಮೆ ಮೂಡಿಸಿದೆ. ಕಿರುವಯಸ್ಸಿನಲ್ಲೇ ಅವರು ನಮ್ಮನ್ನು ಅಗಲಿದ್ದು ತೀವ್ರ ಆಘಾತ ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ಆಘಾತವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

‘ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತ ವಾಗಿದೆ. ಅವರ ನಟಿಸ್ಸಿದ್ದ ಪೃತ್ವಿ ಮತ್ತು ರಾಜಕುಮಾರ ಚಿತ್ರವನ್ನು ಅಪ್ಪು ಅವರ ಜೊತೆಯಲ್ಲೇ ನೋಡಿದ್ದೇ ಈ ದಿನ ಅವರಿಲ್ಲ ಎಂದರೆ ನಂಬಲಸಾಧ್ಯವಾಗಿದೆ. ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಬರಿಸುವ ಶಕ್ತಿ ತುಂಬಲಿ’ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಟ್ವೀಟ್ ಮಾಡಿದ್ದಾರೆ.
‘ಕನ್ನಡದ ಶ್ರೇಷ್ಠ ನಟ ಶ್ರೀ ಪುನೀತ್ ರಾಜಕುಮಾರ್ ಇನ್ನಿಲ್ಲ ಎಂಬ ಸಂಗತಿಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಬಾಲನಟನಾಗಿ ಮನಸೂರೆಗೊಂಡು ನಂತರದ ದಿನಗಳಲ್ಲಿ ನಾಯಕನಟನಾಗಿ ಮನೆಮಾತಾಗಿದ್ದ ಅವರು ಉತ್ತಮ ಗಾಯಕರೂ ಆಗಿದ್ದರು. ಅವರ ಕುಟುಂಬ ವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಸಾಂತ್ವನ ಕೋರುತ್ತೇನೆ. ಪವರ್ ಸ್ಟಾರ್ ಚಿತ್ರಪ್ರೇಮಿಗಳ ಹೃದಯದಲ್ಲಿ ಅಜರಾಮರ’ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಟ್ವೀಟ್ ಮಾಡಿದ್ದಾರೆ.

‘ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ಕನ್ನಡ ಚಲನಚಿತ್ರರಂಗ ಒಬ್ಬ ಉತ್ತಮ ನಟನನ್ನು ಕಳೆದುಕೊಂಡಿರುವುದು ದುಃಖಕರ ಸಂಗತಿ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಅವರ ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ನೋವನ್ನು ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಚಿವ ಈಶ್ವರಪ್ಪ ಟ್ವೀಟ್‌ ಮಾಡಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss