ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ ಸಾವು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ (55) ಸಾವನ್ನಪ್ಪಿದ್ದಾನೆ. ?

ಹೌದು ಈ ಕುರಿತು ಸುದ್ದಿ ಹರಿದಾಡುತ್ತಿದ್ದು, ಇಂದು ಬೆಳಗ್ಗೆ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಮಸೂದ್ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಆದರೆ ಈ ಕುರಿತಾಗಿ ಯಾವುದೇ ಅಧಿಕೃತವಾದ ಮಾಹಿತಿ ಕೂಡಾ ಲಭ್ಯವಾಗಿಲ್ಲ.

ಮೊಹಮ್ಮದ್ ಮಸೂದ್ ಅಜರ್ ಅಲ್ವಿ, ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸ್ಥಾಪಕ. ಸೋಮವಾರ ಬೆಳಗ್ಗೆ ಭಾವಲ್‌ಪುರ ಮಸೀದಿಯಿಂದ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಅವರ ಮೇಲೆ ಬಾಂಬ್ ಎಸೆದಿದ್ದಾರೆ ಎಂದು ವರದಿಯಾಗಿದೆ. ಮಸೂದ್ ಅಜರ್ ಸಾವಿನ ಕುರಿತು ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ. ಆದರೆ ಖಾಸಗಿ ವಾಹಿನಿ ಈ ಕುರಿತಾಗಿ ಕೆಲವು ಫೋಟೋಗಳನ್ನು ಶೇರ್​ ಮಾಡಿ ಮಸೂದ್ ಅಜರ್ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದೆ. ಆದರೆ ಈ ಕುರಿತಾಗಿ ಅಧಿಕೃತ ಮಾಹಿತಿ ಹೊರ ಬರಬೇಕಿದೆ.

2001 ರ ಭಾರತೀಯ ಸಂಸತ್ತಿನ ಮೇಲಿನ ದಾಳಿ, 2008 ರ ಮುಂಬೈ ದಾಳಿ, 2016 ರ ಪಠಾಣ್‌ ಕೋಟ್ ದಾಳಿ ಮತ್ತು 2019 ರ ಪುಲ್ವಾಮಾ ದಾಳಿಗಳಿಗೆ ಕಾರಣವಾದ ಜೈಶ್-ಎ-ಮೊಹಮ್ಮದ್ ಅನ್ನು ಅಜಹರ ಸ್ಥಾಪಿಸಿದ್ದನು.

ಮೇ 1, 2019 ರಂದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅವನನ್ನು ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಘೋಷಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!