ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆ ನಿರ್ಮಿಸಲು ಮಾಡಿದ್ದ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಸೈನಿಕ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ಹೊಸ ಬಡಾವಣೆಯಲ್ಲಿ ನಡೆದಿದೆ.
ನಂಜಾಪುರದ ನಿವಾಸಿ ಎಂ.ಚಂದ್ರಶೇಖರ್ (35) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯೋಧ. ಅವರು ಹೊಸ ಬಡಾವಣೆಯಲ್ಲಿ ಎರಡು ವರ್ಷಗಳ ಹಿಂದೆ ಹೊಸದಾಗಿ ಮನೆ ನಿರ್ಮಿಸಿದ್ದರು. ಆ ವೇಳೆ ಬ್ಯಾಂಕ್ ಹಾಗೂ ಸ್ನೇಹಿತರ ಬಳಿ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ಪರದಾಡುತ್ತಿದ್ದರು ಎಂದು ತಿಳಿದು ಬಂದಿದೆ.
15 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರ, ಆಗ್ರಾ, ಚೀನಾ ಗಡಿಯಲ್ಲಿ ಚಂದ್ರಶೇಖರ್ ಕರ್ತವ್ಯ ನಿರ್ವಹಿಸಿದ್ದರು. 1 ತಿಂಗಳ ಹಿಂದೆ ಅವರು ರಜೆ ಮೇಲೆ ಮನೆಗೆ ಬಂದಿದ್ದರು. ದೀಪಾವಳಿ ಹಬ್ಬದ ನಂತರ ಕರ್ತವ್ಯಕ್ಕೆ ವಾಪಸ್ಸಾಗ ಬೇಕಿತ್ತು.
ಸೂರಿನ ಸಾಲವೇ ಭಾರವಾಯ್ತು! ಯೋಧ ಆತ್ಮಹತ್ಯೆ
