ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪವರ್ ಶೇರಿಂಗ್ ಏನೇ ಅಂದರು ಹೈಕಮಾಂಡ್ ಏನು ಅಭಿಪ್ರಾಯ ಹೇಳುತ್ತೋ ಅದೇ ಅಂತಿಮ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿ, ಸತೀಶ್ ಜಾರಕಿಹೊಳಿ ಹಾಗೂ ನಮ್ಮ ಸಂಬಂಧ ಮೂವತ್ತು ವರ್ಷಕ್ಕಿಂತ ಹೆಚ್ಚಿನದು. ಸತೀಶ್ ಜಾರಕಿಹೊಳಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಟನಲ್ ಬಗ್ಗೆ ಎಲ್ಲಾ ಚರ್ಚೆ ಮಾಡಿದ್ದರು. ದೆಹಲಿಗೆ ಹೋದಾಗ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುವುದು ಸಹಜ ಎಂದರು.
ರಾಜೇಂದ್ರ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ ಕಂಪ್ಲೆಂಟ್ ಕೊಟ್ಟಿದ್ದಾರೆ. ಪ್ರಭಾವಿ ಯಾರೂ ಎಂದು ನಾನು ಹೇಗೆ ಹೇಳೋಕಾಗುತ್ತದೆ. ತನಿಖೆ ಆಗಲಿ, ಸತ್ಯಾಸತ್ಯತೆ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.