March 20, 2026
Friday, March 20, 2026
spot_img

ಸಿಎಂ ಹುದ್ದೆ ತೀರ್ಮಾನ ಹೈಕಮಾಂಡ್‌ ಗೆ ಬಿಟ್ಟದ್ದು: ಜಿ. ಪರಮೇಶ್ವರ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಭಿಮಾನಿಗಳು “ಸಿಎಂ ಆಗಬೇಕು” ಎಂದು ಘೋಷಣೆ ಕೂಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ್, ಈ ವಿಷಯದಲ್ಲಿ ತಾವು ಯಾವುದೇ ಗೊಂದಲಕ್ಕೆ ಕಾರಣರಾಗಲು ಬಯಸುವುದಿಲ್ಲ ಎಂದು ಹೇಳಿದರು. ಸಿಎಂ ಹುದ್ದೆ ಕುರಿತ ಅಂತಿಮ ತೀರ್ಮಾನ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಬೇಕಾದದ್ದು, ಅದರಲ್ಲಿ ತಾವು ಲಾಬಿ ನಡೆಸಿಲ್ಲ ಎಂದೂ ಸ್ಪಷ್ಟಪಡಿಸಿದರು.

“ನಾನು ದೆಹಲಿಗೆ ಹೋಗಿ ಯಾರನ್ನೂ ಭೇಟಿಯಾಗಿಲ್ಲ. ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು, ಆದರೆ ಅದನ್ನು ತಡೆಯಲು ಸಾಧ್ಯವಿಲ್ಲ. ನಾನು ಈ ಚರ್ಚೆಗಳಿಗೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ,” ಎಂದು ಹೇಳಿದರು.

ಇದನ್ನೂ ಓದಿ:

ಇದೇ ವೇಳೆ ರಾಜ್ಯದಲ್ಲಿ ಸುಮಾರು 15 ಸಾವಿರ ಮಕ್ಕಳು ಕಾಣೆಯಾಗಿರುವ ವರದಿ ಕುರಿತು ಅವರು ಪ್ರತಿಕ್ರಿಯಿಸಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದರು. ಜಿಲ್ಲಾವಾರು ಪರಿಶೀಲನೆ ವೇಳೆ ಈ ಪ್ರಕರಣಗಳನ್ನು ವಿಮರ್ಶಿಸಲಾಗುತ್ತಿದ್ದು, ಹಲವಾರು ಮಕ್ಕಳನ್ನು ಈಗಾಗಲೇ ಪತ್ತೆ ಹಚ್ಚಲಾಗಿದೆ. ಉಳಿದ ಪ್ರಕರಣಗಳಿಗೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !