ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಆರೋಗ್ಯ ಕ್ಷೇತ್ರಕ್ಕೆ ಉತ್ತಮ ಅನುದಾನ ನೀಡಿದ್ದಾರೆ.
ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು, ಈ ರೀತಿ ಆಸ್ಪತ್ರೆ ದೇಶದಲ್ಲಿ ಇದೇ ಮೊದಲಾಗಿದೆ.
ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾಸ್ಪತ್ರೆಗಳ ಉನ್ನತೀಕರಣ, ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.