Wednesday, March 29, 2023

Latest Posts

ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ಪತ್ನಿಗೆ ದೆಹಲಿ ಕೋರ್ಟ್‌ ಕಟ್ಟುನಿಟ್ಟಿನ ಆದೇಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ಪತ್ನಿ ಆಯೇಷಾ ಮುಖರ್ಜಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಯಾವುದೇ ಸಮಯದಲ್ಲಿ ಅಥವಾ ಸ್ಥಳದಲ್ಲಿ ಧವನ್ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸ್ಪಷ್ಟ ಸೂಚನೆ ನೀಡಿದೆ. ಈ ದಂಪತಿ 2020 ರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಕೆಲ ವೈಯಕ್ತಿಕ ಕಾರಣದಗಳಿಂದ ವಿಚ್ಛೇದನಕ್ಕೂ ನಿರ್ಧರಿಸಿದ್ದಾರೆ. ವಿಚ್ಛೇದನ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿರುವಾಗಲೇ ಆಯೇಷಾ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಧವನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಆಯೇಷಾಗೆ ಹಾಗೆ ಮಾಡದಂತೆ ಪಟಿಯಾಲ ಹೌಸ್ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ.

ಆಯೇಷಾ ಮುಖರ್ಜಿ ಆಸ್ಟ್ರೇಲಿಯಾ ಮೂಲದ ಪ್ರಜೆ. ಶಿಖರ್ ಧವನ್ ಮತ್ತು ಆಯೇಶಾ ಭೇಟಿ ಪರಿಚಯ ಸ್ವಲ್ಪ ಪ್ರೀತಿಗೆ ತಿರುಗಿತ್ತು. ಆದರೆ, ಆಯೇಷಾ ಆಗಲೇ ಮದುವೆಯಾಗಿದ್ದಳು. ಅವಳು ತನ್ನ ಪತಿಗೆ ವಿಚ್ಛೇದನ ನೀಡಿದ್ದು, ಇಬ್ಬರು ಹೆಣ್ಣು ಮಕ್ಕಳೂ ಇದ್ದಾರೆ. ತನ್ನ ಮೊದಲ ಪತಿಯಿಂದ ವಿಚ್ಛೇದನದ ನಂತರ, ಅವರು ಧವನ್ ಅವರನ್ನು 2012 ರಲ್ಲಿ ವಿವಾಹವಾದರು. 2014 ರಲ್ಲಿ ಅವರಿಗೆ ಒಬ್ಬ ಮಗ ಕೂಡ ಜನಿಸಿದನು. 2020 ರಲ್ಲಿ, ದಂಪತಿ ನಡುವೆ ಘರ್ಷಣೆ ಉಂಟಾಗಿ ಅಂದಿನಿಂದ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!