Wednesday, July 6, 2022

Latest Posts

ರಾಕ್ಷಸರನ್ನು ಕೊಂದ ಚಾಮುಂಡಿ ದೇವಿಯ ತಾಯ್ನಾಡಿನಲ್ಲಿ ನಡೆದ ಘಟನೆ ಹೃದಯ ವಿದ್ರಾವಕ: ನಟಿ ಪ್ರಣಿತಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಹಲವು ಸಂಘಟನೆಗಳು, ಸಿನಿಮಾ ತಾರೆಯರು ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. ಇದೀಗ ನಟಿ ಪ್ರಣಿತಾ ಸುಭಾಷ್ ಕೂಡ ಈ ಘಟನೆಯನ್ನು ವಿರೋಧಿಸಿದ್ದಾರೆ.
ಈ ಬಗ್ಗೆ ಟ್ವೀಟ್​ ಮಾಡಿರುವ ಪ್ರಣಿತಾ, ‘ಈ ಭಯಾನಕ ಘಟನೆಯ ಬಗ್ಗೆ ತನ್ನ ವಿರೋಧವನ್ನು ವ್ಯಕ್ತಪಡಿಸಿದ್ದು. ನಾವು ಮಹಿಳೆಯರನ್ನು ದೇವತೆಯಾಗಿ ಪೂಜಿಸುವ ದೇಶಕ್ಕೆ ಸೇರಿದವರು. ರಾಕ್ಷಸರನ್ನು ಕೊಂದ ಚಾಮುಂಡಿ ದೇವಿಯ ತಾಯ್ನಾಡಿನಲ್ಲಿ ಇಂತಹ ಭಯಾನಕ ಘಟನೆ ನಡೆದಿರುವುದು ಹೃದಯ ವಿದ್ರಾವಕವಾಗಿದೆ. ಶ್ರೀಮಂತ ಸಂಸ್ಕೃತಿಗೆ ಹೆಸರಾದ ಮೈಸೂರು ನಗರದಲ್ಲಿ ಇಂತಹ ಘಟನೆ ನಡೆದಿದೆ ಎಂದು ಊಹಿಸಲೂ ಸಾಧ್ಯವಿಲ್ಲ. ಮಹಿಳೆಯರ ಮೇಲಿನ ಶೋಷಣೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಮೈಸೂರು ಅತ್ಯಾಚಾರ ಪ್ರಕರಣ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ನಟಿ ಪ್ರಣಿತಾ ಸುಭಾಷ್ ಒತ್ತಾಯಿಸಿದ್ದಾರೆ‌.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss