October 15, 2026
Thursday, October 15, 2026
spot_img

ಸರ್ಕಾರಿ ಉದ್ಯೋಗದ ಆಸೆ ದುಬಾರಿಯಾಯ್ತು: 26 ಲಕ್ಷ ರೂ.ವಂಚನೆ; ನಾಲ್ವರ ವಿರುದ್ಧ FIR

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಖಾಸಗಿ ಕಂಪನಿಯ ಹಿರಿಯ ವ್ಯವಸ್ಥಾಪಕರೊಬ್ಬರಿಂದ 26 ಲಕ್ಷ ರೂ. ಪಡೆದು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಹುದ್ದೆ ಹೆಸರಿನಲ್ಲಿ ಲಕ್ಷಾಂತರ ರೂ. ವಸೂಲಿ

ಆರೋಪಿಯು ತಾನು ಸರ್ಕಾರಿ ಇಲಾಖೆಯ ಅಧಿಕಾರಿಗಳ ಸಂಪರ್ಕದಲ್ಲಿದ್ದೇನೆ ಎಂದು ನಂಬಿಸಿ, ಪಿಡಿಒ ಹುದ್ದೆ ಕೊಡಿಸಲು 50 ಲಕ್ಷ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಅದರಂತೆ ಹಂತ ಹಂತವಾಗಿ 26 ಲಕ್ಷ ಪಡೆದುಕೊಂಡಿದ್ದಾನೆ. ಬಳಿಕ ನೇಮಕಾತಿ ಶೀಘ್ರದಲ್ಲೇ ಆಗಲಿದೆ ಎಂದು ಪದೇ ಪದೇ ಭರವಸೆ ನೀಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:

ನಕಲಿ ಕರೆ ಮೂಲಕ ನಂಬಿಸಿ, ಬಳಿಕ ಸಂಪರ್ಕ ಕಡಿತ

ಸಂಶಯ ಮೂಡದಂತೆ ಕೆಪಿಎಸ್‌ಸಿ ಅಧಿಕಾರಿಯ ಹೆಸರಿನಲ್ಲಿ ನಕಲಿ ಕರೆ ಮಾಡಿಸಿ ಉದ್ಯೋಗ ಖಚಿತ ಎಂದು ನಂಬಿಸಲಾಗಿತ್ತು. ಆದರೆ ನೇಮಕಾತಿ ಆದೇಶ ಸಿಗದೇ, ಆರೋಪಿಗಳು ಸಂಪರ್ಕ ಕಡಿತಗೊಳಿಸಿದ ಬಳಿಕ ವಂಚನೆ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Must Read