ಹೊಸದಿಗಂತ ಡಿಜಿಟಲ್ ಡೆಸ್ಕ್
ಮಂಗಳವಾರ ಬೆಳಗಾವಿಗೆ ಬರುವುದಾಗಿ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಆಡಳಿತರೋಡ ಇಬ್ಬರು ಸಚಿವರು ಹಾಗೂ ಓರ್ವ ಸಂಸದನಿಗೆ ಬೆಳಗಾವಿ ಜಿಲ್ಲೆ ಪ್ರವೇಶವನ್ನು ನಿಷೇಧಿಸಿ ಸೋಮವಾರ ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಆದೇಶಿಸಿದ್ದಾರೆ.
ಡಿ. 6 ಮಂಗಳವಾರ ಬೆಳಗಾವಿಗೆ ಬರುವುದಾಗಿ ಹಾಗೂ ಇಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾಗಿ ಹೇಳಿದ್ದ ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ (ದಾದಾ) ಪಾಟೀಲ, ಶಂಬುರಾಜ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆಯೊಳಗೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.