spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮ ಪ್ರಗತಿಗೆ ಜಿಲ್ಲಾಧಿಕಾರಿ ಸೂಚನೆ

- Advertisement -Nitte

ಹೊಸ ದಿಗಂತ ವರದಿ, ಮಡಿಕೇರಿ:

ಅಲ್ಪಸಂಖ್ಯಾತರಿಗೆ ಮೀಸಲಿರುವ ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತರಿಗೆ ಮೀಸಲಿರುವ ಯೋಜನೆಗಳ ದಾಖಲಾತಿಗಳ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ತಯಾರಿಸಿ ಮಾಹಿತಿ ನೀಡಬೇಕು. ಸರ್ಕಾರದ ಅನುದಾನ ಯಾವುದೇ ರೀತಿಯಲ್ಲಿ ವ್ಯಪಗತವಾಗದಂತೆ ಶೇಕಡವಾರು ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಮಾತನಾಡಿ, ಅಲ್ಪಸಂಖ್ಯಾತರ ಯೋಜನಾ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಬೇಕು. ಆಯಾಯ ವರ್ಷದಲ್ಲಿ ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಾಮ ನಿರ್ದೇಶಿತ ಸದಸ್ಯರಾದ ಕೆ.ಟಿ.ಬೇಬಿ ಮ್ಯಾಥ್ಯು ಅವರು ಮಾತನಾಡಿ, ಸರ್ಕಾರದಿಂದ ಅಲ್ಪಸಂಖ್ಯಾತರಿಗೆ ಹಲವು ಕಾರ್ಯಕ್ರಮಗಳಿದ್ದು, ಅವುಗಳನ್ನು ತಲುಪಿಸುವಂತಾಗಬೇಕು. ಆ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಮಟ್ಟಗಳಲ್ಲಿ ಮತ್ತಷ್ಟು ಜಾಗೃತಿ ಮೂಡಿಸಬೇಕು ಎಂದರು.
ಸದಸ್ಯ ಲತೀಫ್ ಅವರು ಮಾತನಾಡಿ, ಕುಶಾಲನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ ಹೆಚ್ಚಿನ ಕೊಠಡಿ ನಿರ್ಮಿಸಬೇಕು ಎಂದು ಮನವಿ ಮಾಡಿದರು.
ಮತ್ತೊಬ್ಬ ಸದಸ್ಯ ಕೆ.ಎ.ಯಾಕುಬ್ ಅವರು ಮಾತನಾಡಿ, ಅಲ್ಪಸಂಖ್ಯಾತರಿಗೆ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಮತ್ತಷ್ಟು ಸೌಲಭ್ಯಗಳು ದೊರೆಯಬೇಕು. ಜೊತೆಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಬೇಕು ಎಂದರು.
ಶೇ.100ರಷ್ಟು ಪ್ರಗತಿ: ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆಯಡಿ ಶೇ.82 ರಷ್ಟು ಪ್ರಗತಿ ಹೊಂದಿದ್ದು, ನಿರ್ಗತಿಕ ಮಕ್ಕಳ ಕುಟೀರಕ್ಕೆ ಅನುದಾನ ಹಾಗೂ ಉದ್ಯೋಗಿನಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗಾಗಿ ಶೇ.100 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ವಿ.ಸುರೇಶ್ ಅವರು ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಉಪ ನಿರ್ದೇಶಕ ಮುತ್ತುರಾಜು ಅವರು, ಕೃಷಿ ಇಲಾಖೆಯಿಂದ ಅಲ್ಪಸಂಖ್ಯಾತರಿಗೆ ಇರುವ ಯೋಜನೆಗಳ ಸಲುವಾಗಿ ಜಿಲ್ಲೆಯಲ್ಲಿ ಪ್ರಗತಿ ಸಾಧಿಸಲು ಶ್ರಮಿಸಲಾಗಿದೆ. ಕೃಷಿ ಪರಿಕರಗಳು ಮತ್ತು ಗುಣಮಟ್ಟ ನಿಯಂತ್ರಣದಲ್ಲಿ ಶೇ.28.49 ರಷ್ಟು ಹಾಗೂ ಕೇಂದ್ರ ಪುರಸ್ಕೃತ ಯೋಜನೆಯಲ್ಲಿ ಒಟ್ಟು ಶೇ.10.46 ರಷ್ಟು ಪ್ರಗತಿಯನ್ನು ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.
ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಕೆ.ಟಿ.ದರ್ಶನಾ ಅವರು ಮಾಹಿತಿ ನೀಡಿ, ಮತ್ಸ್ಯವಾಹಿನಿ ಯೋಜನೆಯಡಿ ಮಾರಾಟ ಸಂಬಂಧಿತ ಅರ್ಜಿಗಳು ಸಲ್ಲಿಕೆಯಾಗುತ್ತಿದೆ. ಮೀನುಗಾರಿಕೆ ಸಲಕರಣೆ ಕಿಟ್ ಗಳನ್ನು ಕೊಡಲಾಗುತ್ತಿದೆ. ಆರ್‌ಕೆವಿವೈ ಯೋಜನೆಯಡಿ ಶೇ.100 ರಷ್ಟು ಪ್ರಗತಿ ಸಾಧಿಸಲಾಗುತ್ತಿದೆ ಎಂದರು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಅಲ್ಪಸಂಖ್ಯಾತರಿಗೆ ಹಲವು ಯೋಜನೆ ತಲುಪಿಸಲು ಶ್ರಮಿಸಲಾಗಿದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಸುರೇಶ್ ಭಟ್ ಹೇಳಿದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ ಅವರು, ಜೇನು ಕೃಷಿ, ಕೀಟ ಮತ್ತು ರೋಗ ನಿಯಂತ್ರಣ ಹಾಗೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗಳಲ್ಲಿ ಆರ್ಥಿಕವಾಗಿ ಶೇ.26.01 ಹಾಗೂ ಭೌತಿಕವಾಗಿ ಶೇ.58.96 ರಷ್ಟು ಪ್ರಗತಿ ಹೊಂದಲಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ಆಹಾರ ಇಲಾಖೆ ಉಪ ನಿರ್ದೇಶಕ ಗೌರವ ಕುಮಾರ್ ಶೆಟ್ಟಿ ಮತ್ತಿತರರು ತಮ್ಮ ಇಲಾಖಾ ವ್ಯಾಪ್ತಿಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss