ಜಯದೇವ ಆಸ್ಪತ್ರೆ ಲೋಕಾರ್ಪಣೆಗೆ ಜಿಲ್ಲಾ ಉಸ್ತುವಾರಿ ಸಚಿವರೇ ಗೈರು

ಹೊಸದಿಗಂತ ವರದಿ ಕಲಬುರಗಿ:

ಕಲ್ಯಾಣ ಕರ್ನಾಟಕ ಭಾಗದ ಜನರ ಬಹುನಿರೀಕ್ಷಿತ ೩೭೧ ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆಯ ಕಲಬುರಗಿ ಶಾಖೆಯ ಲೋಕಾರ್ಪಣೆಗೆ ಖುದ್ದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಗೈರಾಗಿದ್ದು, ಸಾರ್ವಜನಿಕರ ವಲಯದಲ್ಲಿ ಅಚ್ಚರಿ ಮೂಡಿಸಿದೆ.

ಕಳೆದ ಎರಡು ದಿನಗಳಿಂದ ಕಲಬುರಗಿ ನಗರದಲ್ಲಿಯೇ ಠಿಕಾಣಿ ಹೂಡಿ, ಜಯದೇವ ಆಸ್ಪತ್ರೆಯ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸೇರಿ ನೋಡಿಕೊಂಡಿದ್ದರು.ಸಾಲದಂತೆ ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಶನಿವಾರ ಡಿ.೨೧ರ ಮಧ್ಯಾಹ್ನ ಬೆಂಗಳೂರಿಗೆ ತೆರಳಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆಗಮಿಸಬೇಕಿತ್ತು.ಆದರೆ, ಆಗಮಿಸದೇ ಸಮಾರಂಭದಿಂದ ದೂರ ಉಳಿದಿದ್ದು,ಬಹು ಚರ್ಚೆಗೆ ಗ್ರಾಸವಾಗಿದೆ.

ಬೇರೊಂದು ಕಾರ್ಯಕ್ರಮದಲ್ಲಿ ಹೋಗಿದ್ದು, ಅನ್ಯತಾ ಭಾವಿಸದಿರಿ.

ಜಯದೇವ ಆಸ್ಪತ್ರೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗೈರಾಗಿರುವ ಕುರಿತು ಸ್ಪಷ್ಟೀಕರಣ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಿಯಾಂಕ್ ಖರ್ಗೆ ಅವರು ಪೂರ್ವ ನಿಯೋಜಿತ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿರುವದರಿಂದ ಕಲಬುರಗಿ ಜಯದೇವ ಆಸ್ಪತ್ರೆ ಲೋಕಾರ್ಪಣೆಗೆ ಆಗಮಿಸಿಲ್ಲ. ಬೆಂಗಳೂರಿನಲ್ಲಿ ಗೋವಾದ ಗವರ್ನರ್,ನವರಿಗೆ ಡಾಕ್ಟರ್ ರೆಟ್ ಪ್ರಧಾನ ಮಾಡುವ ಕಾರ್ಯಕ್ರಮ ಇರುವುದರಿಂದ ಅವರಿಗೆ ನಾನೇ ಖುದ್ದಾಗಿ ಹೋಗಿ ಭಾಗವಹಿಸುವಂತೆ ಹೇಳಿದ್ದೇನೆ. ಹೀಗಾಗಿ ಅವರು ಕಲಬುರಗಿ ಜಯದೇವ ಆಸ್ಪತ್ರೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹಾಜರಾಗಿಲ್ಲ ಎಂದು ಸ್ಪಷ್ಟಪಡಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!