16 ಸಾವಿರಕ್ಕೂ ಹೆಚ್ಚು ಹೃದಯ ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯ ಹೃದಯಾಘಾತದಿಂದ ಸಾವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

16 ಸಾವಿರಕ್ಕೂ ಹೆಚ್ಚು ಹೃದಯ ಸಂಬಂಧಿತ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ ಹೃದ್ರೋಗ ತಜ್ಞಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುಜರಾತಿನ ಜಾಮ್​ನಗರದಲ್ಲಿ ನಡೆದಿದೆ.

ಖ್ಯಾತ ಹೃದ್ರೋಗ ತಜ್ಞ ಡಾ.ಗೌರವ್ ಗಾಂಧಿ(41) ಅವರ ಸಾವಿನಿಂದ ಶೋಕ ಮಡುಗಟ್ಟಿದ್ದು ಜಾಮ್​ನಗರದಲ್ಲಿ ಇದ್ದ ಅತ್ಯುತ್ತಮ ಹೃದ್ರೋಗ ತಜ್ಞರಲ್ಲಿ ಇವರು ಕೂಡ ಒಬ್ಬರು ಎಂದು ಹೇಳಲಾಗಿದೆ.

ಈ ಕುರಿತು ಪೊಲೀಸ್​ ಅಧಿಕಾರಿ ಪ್ರತಿಕ್ರಿಯಿಸಿದ್ದು , ಸೋಮವಾರ ರಾತ್ರಿ ಎಂದಿನಂತೆ ತಮ್ಮ ಕಾರ್ಯ ಮುಗಿಸಿ ಮನೆಗೆ ವಾಪಸ್ಸಾಗಿದ್ದ ವೈದ್ಯ ಗಾಂಧಿ ಅವರು ಮಲಗಿರುವಾಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ಧಾರೆ. ಎಂದಿನಂತೆ ಕುಟುಂಬಸ್ಥರ ಜೊತೆಗೆ ಆಹಾರ ಸೇವಿಸಿದ ಗೌರವ್ ಸಾಮಾನ್ಯವಾಗಿ ಇದ್ದರೂ ಅವರ​ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಾಣಿಸಿಕೊಂಡಿರಲಿಲ್ಲ.

ಮರುದಿನ ಬೆಳಗ್ಗೆ ಕುಟುಂಬಸ್ಥರು ಅವರನ್ನು ಏಳಿಸಲು ಪ್ರಯತ್ನಿಸಿದ್ದು, ಆದರೆ, ಅವರು ಯಾರ ಮಾತಿಗೂ ಪ್ರತಿಕ್ರಿಯಿಸಲಿಲ್ಲ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಗೌರವ್​ ಮೃತಪಟ್ಟಿರುವುದಾಗಿ ಘೋಷಿಸಿದ್ಧಾರೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ಧಾರೆ.

ವೈದ್ಯ ಗೌರವ್​ ಗಾಂಧಿ ಇಲ್ಲಿಯವರೆಗೂ 16,000ಕ್ಕೂ ಹೆಚ್ಚು ಹೃದಯ ಸಂಬಂಧಿತ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!