ಹೊಸ ದಿಗಂತ ಡಿಜಿಟಲ್ ಡೆಸ್ಕ್:
I.N.D.I.A ಮೈತ್ರಿಕೂಟಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮರಳಲು ಬಯಸಿದರೆ ಅವರಿಗೆ ಒಕ್ಕೂಟದ ಬಾಗಿಲು ಸದಾ ತೆರೆದಿರುತ್ತದೆ ಎಂದು ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ.
I.N.D.I.A ಒಕ್ಕೂಟದಲ್ಲಿ ನಾಯಕತ್ವಕ್ಕಾಗಿಒಳಜಗಳ ನಡೆಯುತ್ತಿರುವ ಹೊತ್ತಲ್ಲಿ ಈ ಹೇಳಿಕೆ ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಈ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಸಿಎಂ ನಿತೀಶ್ ಕುಮಾರ್ ಅವರಿಗಾಗಿ I.N.D.I.A ಒಕ್ಕೂಟದ ಬಾಗಿಲು ತೆರೆದಿದೆ. ಅವರು ಒಗ್ಗೂಡಿ ಕೆಲಸ ಮಾಡಲಿ, ಮಹಾಮೈತ್ರಿಯೊಂದಿಗೆ ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಮಾತನಾಡಿದ್ದ ಲಾಲೂ ಪುತ್ರ ಮಾಜಿ ಡಿಸಿಎಂ ತೇಜಸ್ವಿ ಯಾದವ್, ನಿತೀಶ್ ಕುಮಾರ್ ಅವರು ಈಗ ಸುಸ್ತಾಗಿದ್ದಾರೆ. ಅವರಿಗೆ I.N.D.I.A ಮಹಾಮೈತ್ರಿಕೂಟದ ಬಾಗಿಲು ಮುಚ್ಚಿದೆ. ಆದರೆ ಸಿಎಂ ನಿತೀಶ್ ಕುಮಾರ್ ವಿಚಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೆ ಅದನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದರು.
ಇದಾದ ಬಳಿಕ ಲಾಲೂ ಪ್ರಸಾದ್ ಅವರ ಈ ಹೇಳಿಕೆ ಎಲ್ಲರನ್ನೂ ಅಚ್ಚರಿಪಡಿಸಿದೆ.