ಹೊಸದಿಗಂತ ವರದಿ ಹುಬ್ಬಳ್ಳಿ:
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ತಾಲ್ಲೂಕಿನ ಪಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಖಾಸಗಿ ಸೀಬಡ್೯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಗಾಯಗೊಂಡ ಪ್ರಯಾಣಿಕರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಚಿಕಿತ್ಸೆ ರವಾನಿಸಲಾಗಿದೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.