ಚಾಲಕನ ‌ನಿಯಂತ್ರಣ ತಪ್ಪಿ ಕಾರು ಪಲ್ಟಿ: ಅದೃಷ್ಟವಶಾತ್ ಪ್ರಯಾಣಿಕರು ಸೇಫ್

ಹೊಸದಿಗಂತ ಕುಶಾಲನಗರ:

ಮದುವೆ ಕಾರ್ಯ ನಿಮಿತ್ತ ತೆರಳುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ಹೆಬ್ಬಾಲೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಅದರಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗೋಣಿಮರೂರು ಗ್ರಾಮದ‌ ನಿವಾಸಿ ಚಂದ್ರಶೇಖರ್ ಎಂಬವರು ತಮ್ಮ ಕುಟುಂಬ ಸಮೇತ ಕುಶಾಲನಗರದಲ್ಲಿ ನಡೆಯಲಿದ್ದ ಮದುವೆ ಸಮಾರಂಭಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಹೆಬ್ಬಾಲೆ ಗ್ರಾಮದ ಹಾಸನ ಹೆದ್ದಾರಿಯ ತಿರುವಿನಲ್ಲಿ ಕಾರು ಚಾಲಕನ ‌ನಿಯಂತ್ರಣ ತಪ್ಪಿ ಒಂದು ಬದಿಯ ಗೋಡೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದ 8 ವರ್ಷದ ಮಗು ಸಹಿತ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ಕಾರಿನಲ್ಲಿದ್ದ ಮಹಿಳೆಯೊಬ್ಬರ ಸೊಂಟದ ಭಾಗಕ್ಕೆ ಪೆಟ್ಟಾಗಿದ್ದು, ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಗೆ ಕಳುಹಿಸಲಾಗಿದೆ.

ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!