ಹೊಸದಿಗಂತ ವರದಿ, ಅಂಕೋಲಾ:
ಚಾಲಕನ ನಿಯಂತ್ರಣ ತಪ್ಪಿ ಬಲೇನೋ ಕಾರು ಪಲ್ಟಿಯಾದ ಘಟನೆ ತಾಲೂಕಿನ ಹಟ್ಟಿಕೇರಿ ಗೌರಿಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ್ದು ಏರ್ ಬ್ಯಾಗ್ ತೆರೆದುಕೊಂಡ ಕಾರಣ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಯಲ್ಲಾಪುರ ಉಮ್ಮಚಗಿ ನಿವಾಸಿಗಳಿಬ್ಬರು ಕಾರವಾರ ಕಡೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ.
ಕಳೆದ ವಾರ ಇದೇ ಸ್ಥಳದಲ್ಲಿ ಮಹೀಂದ್ರಾ ಥಾರ್ ವಾಹನವೊಂದು ಪಲ್ಟಿಯಾಗಿತ್ತು ಅಲ್ಲದೇ ಎರಡು ವರ್ಷಗಳ ಹಿಂದೆ ಕಾರು ಪಲ್ಟಿಯಾಗಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಒಬ್ಬರು ಮೃತ ಪಟ್ಟ ಘಟನೆ ಇದೇ ಪರಿಸರದಲ್ಲಿ ಸಂಭವಿಸಿತ್ತು.
ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಷ್ಟ್ರೀಯ ಹೆದ್ದಾರಿ ಸುರಕ್ಷತಾ ಸಿಬ್ಬಂದಿಗಳು ಸಹ ಭೇಟಿ ನೀಡಿದರು.