ACCIDENT | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಇನೋವಾ, ಓರ್ವ ಸಾವು

ಹೊಸದಿಗಂತ ವರದಿ ಅಂಕೋಲಾ:

ಇನೋವಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತ ಪಟ್ಟು ನಾಲ್ಕು ಜನ ಗಾಯಗೊಂಡ ಘಟನೆ ತಾಲೂಕಿನ ಸರಳೇಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.
ಆಂಧ್ರಪ್ರದೇಶ ಹೈದರಾಬಾದ್ ಮೂಲದ ರೋಹಿತ್ ಎಂಬಾತ ಮೃತ ಪಟ್ಟಿರುವುದಾಗಿ ತಿಳಿದು ಬಂದಿದ್ದು ಗಂಭೀರವಾಗಿ ಗಾಯಗೊಂಡ ಇನ್ನೋರ್ವನಿಗೆ ಹುಬ್ಬಳ್ಳಿಗೆ ಸಾಗಿಸಲಾಗಿದೆ ಉಳಿದ ಗಾಯಾಳುಗಳಿಗೆ ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೈದರಾಬಾದ್ ನಿಂದ ಗೋವಾ, ಗೋಕರ್ಣ ಮೊದಲಾದ ಪ್ರದೇಶಗಳಿಗೆ ಇನೋವಾ ವಾಹನದಲ್ಲಿ ಪ್ರವಾಸಕ್ಕೆ ಹೊರಟ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಅಂಕೋಲಾ ಪಿ.ಎಸ್. ಐ ಸುನೀಲ ಹುಲ್ಗೊಳ್ಳಿ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಮತ್ತು ಆರ್. ಎಸ್. ಎಸ್ ಸ್ವಯಂ ಸೇವಕರು ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಘಟನೆ ಕುರಿತಂತೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!