ಇತ್ತ ಚೀನಾ ಮೂಲದ ಕಂಪನಿಗಳ ಮೇಲೆ ಶುರುವಾಗಿದೆ ಇಡಿ ದಾಳಿ: ಅತ್ತ ಭಾರತದಿಂದ ಪಲಾಯನಗೊಳ್ಳುತ್ತಿರುವ ನಿರ್ದೇಶಕರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚೀನಾ ಮೂಲದ ವಿವೋ ಮೊಬೈಲ್​ ಕಂಪನಿಯ ಮೇಲೆ ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಡಿ ದಾಳಿ ನಡೆಸಿದ್ದು, ಇದರ ಬೆನ್ನಲ್ಲೇ ಸಂಸ್ಥೆಯ ನಿರ್ದೇಶಕರಾದ ಝೆಂಗ್‌ಶೆನ್ ಔ ಮತ್ತು ಜಾಂಗ್ ಜೀ ಭಾರತದಿಂದ ಪಲಾಯನ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ, ಚೀನಾದ ಸಂಸ್ಥೆಯ ವಿರುದ್ಧ ಇಡಿ ಅಧಿಕಾರಿಗಳು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಉಲ್ಲಂಘನೆಯಡಿ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ದಕ್ಷಿಣದ ಕೆಲ ರಾಜ್ಯಗಳ 40 ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ಮಾಡಿ ತೀವ್ರ ತಪಾಸಣೆಗೆ ಒಳಪಡಿಸಿದ್ದು, ಈ ಮಧ್ಯೆಯೇ ಚೀನಾ ಕಂಪನಿಯ ನಿರ್ದೇಶಕರು ದೇಶದಿಂದ ಕಾಲ್ಕಿತ್ತಿದ್ದಾರೆ.
ಈಗಾಗಲೇ ಕೇಂದ್ರೀಯ ತನಿಖಾ ದಳ (ಸಿಬಿಐ), ತೆರಿಗೆ ಇಲಾಖೆ(ಐಟಿ) ಚೀನಾದ ಮೊಬೈಲ್​ ಉತ್ಪಾದನಾ ಸಂಸ್ಥೆಗಳ ಮೇಲೆ ತನಿಖೆ ನಡೆಸುತ್ತಿದ್ದು, ಇದೀಗ ಜಾರಿ ನಿರ್ದೇಶನಾಲಯ(ಇಡಿ) ಕೂಡ ದಾಳಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!