ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹೆಣ್ಣು ಮಕ್ಕಳಿಗೆ ಶಿಕ್ಷಣ ಇಲಾಖೆ ಶುಭ ಸುದ್ದಿ ನೀಡಿದೆ. ಇನ್ಮುಂದೆ ಎಲ್ಲಾ ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇಕಡಾ 50 ರಷ್ಟು ಸೀಟುಗಳನ್ನು ಮೀಸಲಿಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಹಾಗೂ ಸರ್ಕಾರಿ ಶಾಲೆಗಳಿಗೂ ಕೂಡ ಇದು ಅನ್ವಯವಾಗಲಿದೆ. CBSE, ICSE ಕೇಂದ್ರ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೂ ಅನ್ವಯವಾಗುವಂತೆ ಮೀಸಲಾತಿ ಜಾರಿಗೊಳಿಸಿ ಆದೇಶಿಸಿದೆ.
ಪ್ರತೀ ತರಗತಿಯಲ್ಲಿ ಲಭ್ಯವಿರುವ ಸೀಟುಗಳಲ್ಲಿ ಶೇಕಡಾ 50ರಷ್ಟು ಹೆಣ್ಣು ಮಕ್ಕಳಿಗೆ ಮೀಸಲಿಡಬೇಕು. ನಿರೀಕ್ಷಿತ ಅರ್ಜಿಗಳು ಲಭ್ಯವಿಲ್ಲದೇ ಇದ್ದಾಗ ಉಳಿದ ಸೀಟುಗಳನ್ನು ಬಾಲಕರಿಗೆ ಹಂಚಿಕೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ.