July 28, 2026
Tuesday, July 28, 2026
spot_img

ಪಶ್ಚಿಮ ಬಂಗಾಳದಲ್ಲಿ ರಂಗೇರಿದ ಚುನಾವಣಾ ಅಖಾಡ: ಏಳು ಲಕ್ಷ ಹೊಸ ಮತದಾರರ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳ ಚುನಾವಣೆಗೆ ಇನ್ನೂ ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದ್ದು, ಒಂದೆಡೆ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದರೆ, ಮತ್ತೊಂದೆಡೆ ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ ನಡೆಸುತ್ತಿದೆ. ಇದರ ನಡುವೆ ಸುಮಾರು ಏಳು ಲಕ್ಷ ಹೊಸ ಮತದಾರರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಈ ಪೈಕಿ ಎಪ್ರಿಲ್ 23 ರಂದು ನಡೆಯುವ ಮೊದಲ ಹಂತದ ಮತದಾನದಲ್ಲಿ 3.22 ಲಕ್ಷ ಜನರು ಮತ ಚಲಾಯಿಸಲಿದ್ದಾರೆ. ಉಳಿದ 3.88 ಲಕ್ಷ ಮತದಾರರು ಎರಡನೇ ಹಂತದಲ್ಲಿ ತಮ್ಮ ಹಕನ್ನು ಚಲಾಯಿಸಲಿದ್ದಾರೆ.

ಪ್ರಸುತ್ತ ಮತದಾರರ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡದ ಆಯೋಗವು, ಶೀಘ್ರದಲ್ಲೇ ಒಟ್ಟು ಅಂಕಿಅಂಶಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಬಂದಿದ್ದ ಫಾರ್ಮ್‌-6 ಅರ್ಜಿಗಳ ಸಂಖ್ಯೆ ಹಾಗೂ ತಿರಸ್ಕೃತಗೊಂಡಿರುವ ಮಾಹಿತಿಗಳನ್ನು ಆಯೋಗವು ಬಹಿರಂಗಪಡಿಸಿಲ್ಲ. ಸದ್ಯ ಈ ಹೊಸ ಸೇರ್ಪಡೆ ಬಳಿಕ ಪಶ್ಚಿಮ ಬಂಗಾಳದ ಒಟ್ಟು ಮತದಾರರ ಸಂಖ್ಯೆ 6,82,51,008ಕ್ಕೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ನ್ಯಾಯಮಂಡಳಿಯ ಆದೇಶಗಳನ್ನು ಅನುಸರಿಸಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !