Friday, March 31, 2023

Latest Posts

ಆಸ್ಕರ್ ಗೆದ್ದ ‘ದಿ ಎಲಿಫೆಂಟ್ ವಿಸ್ಪರರ್ಸ್’: ಕಥಾ ನಾಯಕ-ನಾಯಕಿಗೆ ಬಹುಮಾನ ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಸಿನಿಮಾ ಕ್ಷೇತ್ರದಲ್ಲಿ ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಬಂದ ಸಂಭ್ರಮವನ್ನು ಇಡೀ ದೇಶವೇ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಡಿನ ಬಹುತೇಕ ಗಣ್ಯರು ಎರಡೂ ಚಿತ್ರತಂಡಕ್ಕೆ ಮನಸಾರೆ ಪ್ರಂಶಸಿಸಿದ್ದಾರೆ.

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ (MK Stalin) ಆಸ್ಕರ್ ಪ್ರಶಸ್ತಿ ವಿಜೇತ ಡಾಕ್ಯುಮೆಂಟರಿಯ ಕಥಾ ನಾಯಕ ಮತ್ತು ನಾಯಕಿಗೆ ಭರ್ಜರಿ ಬಹುಮಾನ ಘೋಷಿಸಿದ್ದಾರೆ.

ಈ ಬಾರಿ ತೆಲುಗಿನ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಮತ್ತು ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಘೋಷಣೆಯಾಗಿದೆ.

ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯ ನಿಜವಾದ ಹೀರೋ ಬೊಮ್ಮನ್ (Bomman) ಮತ್ತು ಹಿರೋಯಿನ್ ಬೆಳ್ಳಿ (Belli) ಎಂಬ ಮಾವುತ ದಂಪತಿಗಳು. ಈ ಡಾಕ್ಯುಮೆಂಟರಿ ಇವರ ಬದುಕನ್ನೇ ಕೇಂದ್ರಿಕರಿಸಿದ್ದು ಮಾಡಿದ್ದು. ಹಾಗಾಗಿ ಸ್ಟಾಲಿನ್ ಇವರಿಬ್ಬರನ್ನೂ ಸಿಎಂ ಕಚೇರಿಗೆ ಕರೆಯಿಸಿಕೊಂಡು ನೆನಪಿನ ಫಲಕ ಮತ್ತು ಎರಡು ಲಕ್ಷ ರೂಪಾಯಿ ಬಹುಮಾನ ನೀಡಿದ್ದಾರೆ.

ಇವರ ಜೊತೆ ಆನೆ ಶಿಬಿರದಲ್ಲಿ ಕೆಲಸ ಮಾಡುತ್ತಿರುವ 91 ಮಾವುತರಿಗೂ ತಲಾ ಒಂದೊಂದು ಲಕ್ಷ ರೂಪಾಯಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಾವುತರಿಗೆ ಮನೆ ಕಟ್ಟಿಕೊಡಲು 9.1 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!