ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದಲ್ಲಿ ಈಗ ಪ್ರಾಸಿಕ್ಯೂಷನ್ ಎದುರಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಡೀ ರಾಜ್ಯ ಸಚಿವ ಸಂಪುಟವು ತಮ್ಮೊಂದಿಗೆ ನಿಂತಿದೆ ಎಂದು ಹೇಳಿದ್ದಾರೆ.
ಇಡೀ ಸಚಿವ ಸಂಪುಟ, ಪಕ್ಷದ ಹೈಕಮಾಂಡ್, ಎಲ್ಲಾ ಶಾಸಕರು, ಎಂಎಲ್‌ಸಿಗಳು, ಲೋಕಸಭೆ ಮತ್ತು ರಾಜ್ಯಸಭಾ ಸಂಸದರು ನನ್ನೊಂದಿಗಿದ್ದಾರೆ. ಎಂದು ತಿಳಿಸಿದರು.
ಆದರೆ, ಎಲ್ಲವೂ ಕಾನೂನು ಪ್ರಕಾರವೇ ನಡೆದಿದೆ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಅನುಮತಿ ನೀಡಿದ್ದಾರೆ.