ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಕ್ರಿಕೆಟರ್ ವಿರಾಟ್ ಕೊಹ್ಲಿಗೆ ಭಾರತ ರತ್ನ ನೀಡಬೇಕು ಎನ್ನುವ ಕೂಗು ಎದ್ದಿದ್ದು, ಸುರೇಶ್ ರೈನಾ ಕೂಡ ಸಾಥ್ ನೀಡಿದ್ದಾರೆ.
ಭಾರತೀಯ ಕ್ರಿಕೆಟ್ ರಂಗಕ್ಕೆ ವಿರಾಟ್ ಕೊಹ್ಲಿ ನೀಡಿರುವ ಅಪಾರ ಕೊಡುಗೆಗಾಗಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಹೇಳಿದ್ದಾರೆ.
ಕೊಹ್ಲಿ ಭಾರತಕ್ಕಾಗಿ ಹಲವು ಸಾಧನೆಗಳನ್ನು ಮಾಡಿರುವುದರಿಂದ ಭಾರತ ಸರ್ಕಾರ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ನಾನು ಭಾವಿಸುತ್ತೇನೆ ಎಂದು ಸುರೇಶ್ ರೈನಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.