August 31, 2026
Monday, August 31, 2026
spot_img

WEATHER | ರಾಜ್ಯವೆಲ್ಲ ಕೊಂಚ ತಣ್ಣಗಾಯ್ತು! ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ನಿನ್ನೆಯಷ್ಟೇ ಸಣ್ಣ ಮಳೆ ಬಿದ್ದಿದ್ದು, ಭೂಮಿ ಕೊಂಚ ತಣ್ಣಗಾಗಿದೆ. ಇಂದು ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದೆ.

ಜುಲೈ 18 ಮತ್ತು 19ರಂದು ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಜುಲೈ 18 ಮತ್ತು 19ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !