ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಂದಿನಿಂದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಆರಂಭಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.4 ಮತ್ತು 5ರಂದು ಶಿಗಾವಿ ಕ್ಷೇತ್ರದಿಂದ ಪ್ರಚಾರ ನಡೆಸಲಿದ್ದು, ಇಂದು ಬೆಳಗ್ಗೆ 9:00 ಗಂಟೆಗೆ ಬೆಂಗಳೂರಿನಿಂದ ಹೊರಟು 10:50ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿರುವ ಸಿಎಂ ಹುಲಗೂರಿನಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಹುರುಳಿಕುಪ್ಪಿ ಮತ್ತು ಸಂಜೆ 6 ಗಂಟೆಗೆ ಬಂಕಾಪುರ ಪಟ್ಟಣದಲ್ಲಿ ಪ್ರಚಾರ ಸಭೆಯನ್ನು ನಿಗದಿಪಡಿಸಲಾಗಿದೆ. ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿರುವ ಸಿಎಂ ಮಂಗಳವಾರ ಬೆಳಗ್ಗೆ 10:45ರಿಂದ ಶಿಗ್ಗಾವಿ ಕ್ಷೇತ್ರದ ಚಂದಾಪುರದಲ್ಲಿ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹಿರೇಬೆಂಡೆಗೆರೆ ಹಾಗೂ ಸಂಜೆ 6 ಗಂಟೆಗೆ ಚಿಲ್ಲೂರುಬಡ್ಡಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ನಂತರ ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಡಿ.ಕೆ. ಶಿವಕುಮಾರ್ ಇಂದು ದಿನವಿಡಿ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರ ಪ್ರಚಾರ ನಡೆಸಲಿದ್ದಾರೆ.