‘ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ನುಂಗಿದ ಹಣ’ ಎಂದಿಗೂ ವಾಪಸ್ ಬರಲ್ಲ…ಆದರೂ…: ತೆಲಂಗಾಣ ಸಿಎಂಗೆ ಪತ್ರ ಬರೆದ ಕನ್ನಡಿಗರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಲ್ಮೀಕಿ ನಿಗಮ ಹಗರಣದಲ್ಲಿ ಕೋಟ್ಯಂತರ ರೂಪಾಯಿ ತೆಲಂಗಾಣ ಕಂಪನಿಗಳಿಗೆ ವರ್ಗಾವಣೆಯಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಹೀಗಾಗಿ ನಮ್ಮ ಹಣ ವಾಪಸ್ ನೀಡುವಂತೆ ತೆಲಂಗಾಣ ಸಿಎಂಗೆ ಕನ್ನಡಿಗರು ಪತ್ರ ಬರೆದಿದ್ದಾರೆ.

ಕರ್ನಾಟಕದ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಲಾಗಿದೆ. ಹೀಗಾಗಿ ಅಕ್ರಮವಾಗಿ ವರ್ಗಾವಣೆಯಾದ ಹಣವನ್ನು ಹಿಂತಿರುಗಿಸಬೇಕು ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅವರಿಗೆ ಮನವಿ ಮಾಡಲಾಗಿದೆ.

ತೆಲಂಗಾಣ ಸಿಎಂಗೆ ಕನ್ನಡಿಗರ ಹೆಸರಿನಲ್ಲಿ ಪತ್ರ ಬರೆದಿರುವ ಪೋಸ್ಟ್ ಅನ್ನು ಜೆಡಿಎಸ್‌ ಹಂಚಿಕೊಂಡಿದ್ದು, ಕರ್ನಾಟಕದ ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಾಗಿದ್ದ ಸುಮಾರು 187 ಕೋಟಿ ರೂ. ಹಣವನ್ನು ನಿಮ್ಮ ನಾಯಕ ರಾಹುಲ್ ಗಾಂಧಿ ಅವರ ಆಣತಿಯಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಸಚಿವ ನಾಗೇಂದ್ರ ಅವರ ಮೂಲಕ ತೆಲಂಗಾಣದ ಕಾಂಗ್ರೆಸ್ ಚುನಾವಣಾ ಖರ್ಚಿಗೆ ಸಾಗಿಸಿದ್ದಾರೆ.

ನಿಮ್ಮಲ್ಲಿ ಕನ್ನಡಿಗರು ಕೇಳಿಕೊಳ್ಳುವುದೇನೆಂದರೆ ನಮ್ಮ ರಾಜ್ಯಕ್ಕೆ ಸೇರಬೇಕಾಗಿದ್ದ ಹಣವನ್ನು ದಯಮಾಡಿ ಹಿಂತಿರುಗಿಸಿ ಕೊಡಿ. ಈ ಹಣ ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಬಳಕೆ ಆಗಬೇಕಿತ್ತು. ಈ ನೀಚ ಸರ್ಕಾರ ಉಂಡು ಹೋದ ಕೊಂಡು ಹೋದ ಎಂಬಂತೆ ತಮ್ಮ ಸ್ವಾರ್ಥಕ್ಕಾಗಿ ಇಲ್ಲಿ ಲೂಟಿ ಹೊಡೆದದ್ದಲ್ಲದೆ, ಮಿಕ್ಕ ಹಣವನ್ನೂ ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಖರ್ಚಿಗೆ ಸಾಗಿಸಿದ್ದಾರೆ.

ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ನಮಗೆ ತಿಳಿದಿದೆ. ಆದ್ರೆ ಕೊನೆ ಪ್ರಯತ್ನವಾಗಿ ನಿಮ್ಮಲ್ಲಿ ಈ ಮನವಿ ಮಾಡುತ್ತಿದ್ದೇವೆ, ಹಣ ಹಿಂತಿರುಗಿಸಿ ವಿಶ್ವಾಸ ಉಳಿಸಿಕೊಳ್ಳಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಸದ್ಯ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

Image

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!