ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರ ಗೌಡ ಎ-1 ಮತ್ತು ದರ್ಶನ್ ಎ-2 ಆರೋಪಿಗಳಾಗಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3,991 ಪುಟಗಳ ವಿವರವಾದ ದೋಷಾರೋಪ ಪಟ್ಟಿಯನ್ನು ರಚಿಸಲಾಗಿದೆ.
ಘಟನೆಯ ತನಿಖೆ ಮುಂದುವರಿದಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆಗೆ ಪವಿತ್ರಾ ಗೌಡ ಪ್ರಮುಖ ಕಾರಣ ಎಂದು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ.