ಯುವ ಕಾಂಗ್ರೆಸ್ ಅಧ್ಯಕ್ಷನಿಗೆ ಶುರುವಾಗಿದೆ ಬಂಧನದ ಭೀತಿ: ಸುಪ್ರೀಂ ಮೊರೆ ಹೋದ ಶ್ರೀನಿವಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧನದ ಭೀತಿಯಲ್ಲಿರುವ ಯುವ ಕಾಂಗ್ರೆಸ್ (Youth Congress) ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ (Srinivas BV) ಸೋಮವಾರ ಸುಪ್ರೀಂ (Supreme Court) ಮೊರೆ ಹೋಗಿದ್ದಾರೆ.

ಕಳೆದ ವಾರ ಗುವಾಹಾಟಿ ಹೈಕೋರ್ಟ್ (Gauhati High Court) ನಿರೀಕ್ಷಣಾ ಜಾಮೀನು ಹಾಗೂ ಎಫ್‍ಐಆರ್‌ (FIR) ರದ್ದುಗೊಳಿಸಲು ನಿರಾಕರಿಸಿದ ಕಾರಣ ಬಂಧನದ ಭೀತಿ ಎದುರಿಸುತ್ತಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ತ ಕಾಮತ್ ಅವರು ತುರ್ತು ವಿಚಾರಣೆ ಕೋರಿ ಸಿಜೆಐ (CJI) ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್ ನರಸಿಂಹ ಮತ್ತು ಜೆ.ಬಿ ಪರ್ದಿವಾಲಾ ಅವರ ಪೀಠದ ಮುಂದೆ ಈ ಮನವಿಯನ್ನು ಪ್ರಸ್ತಾಪಿಸಿದ್ದಾರೆ. ಪೀಠವು ಮುಂದಿನ ವಾರ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಶ್ರೀನಿವಾಸ್ ನಿರಂತರವಾಗಿ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಶ್ಲೀಲ ಮಾತುಗಳಿಂದ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಅಸ್ಸಾಂ ಯುವ ಕಾಂಗ್ರೆಸ್‍ನ (Youth Congress) ಮಾಜಿ ಅಧ್ಯಕ್ಷೆ ಅಂಗಿತಾ ದತ್ತಾ ಅವರು ದೂರು ನೀಡಿದ್ದರು. ಅಲ್ಲದೆ ಅವರ ವರ್ತನೆ ಬಗ್ಗೆ ಕಾಂಗ್ರೆಸ್‍ನ ಉನ್ನತ ನಾಯಕರಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದತ್ತಾ ಆರೋಪಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!