ಹೊಸದಿಗಂತ ವರದಿ ಬಾಗಲಕೋಟೆ :
ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಕೂಡಲಸಂಗಮ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ತಿಳಿಸಿದರು.
ನವನಗರದ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಧರ್ಮಕ್ಕಾಗಿ ಹೈದ್ರಾಬಾದ್ ನಲ್ಲಿ ದೊಡ್ಡಮಟ್ಟದ ರಾಲಿ ನಡೆಸಲಾಗಿದೆ ಈ ಹೋರಾಟ ನಿಲ್ಲುವುದಿಲ್ಲ ಎಂದರು.
ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಬಸವ ಕಲ್ಯಾಣದಲ್ಲಿ ಅಕ್ಟೋಬರ್ 28 ರಿಂದ 29 ರವರೆಗೆ ನಡೆಯುವ ಕಲ್ಯಾಣ ಪರ್ವ ಕಾರ್ಯಕ್ರಮದಲ್ಲಿ ಗಂಭೀರವಾಗಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.
ಕೂಡಲಸಂಗಮ ಬಸವ ಧರ್ಮ ಪೀಠದ ಮಾಹದೇಶ್ವರ ಸ್ವಾಮೀಜಿ ಪತ್ರಿಕಾಗೋಷ್ಠಿ ಯಲ್ಲಿದ್ದರು.