ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ…ಸತ್ಯಮೇವಜಯತೆ: ಹೈಕೋರ್ಟ್ ವಿಚಾರಣೆಗೆ ಸಿದ್ದರಾಮಯ್ಯ ರಿಯಾಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆದಿದ್ದು, ಸುದೀರ್ಘ ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆಯನ್ನು ಆ.29ರ ಮಧ್ಯಾಹ್ನ 2.30ಕ್ಕೆ ಮುಂದೂಡಿದರು.

ಇದೀಗ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿರುವ ಸಿದ್ದರಾಮಯ್ಯ, ಕೋರ್ಟ್​ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ್ದು, ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ. ಸತ್ಯಮೇವಜಯತೆ ಎಂದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ. ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ, ಮುಂದಿನ ವಿಚಾರಣೆಯ ವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು, ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ನೀಡಿದೆ. ನ್ಯಾಯಾಲಯದ ಈ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತ ನನ್ನ ಧನ್ಯವಾದ ಸಲ್ಲಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ. ಸತ್ಯಮೇವಜಯತೆ ಎಂದಿದ್ದಾರೆ.

ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ.

ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ ಮುಂದಿನ ವಿಚಾರಣೆಯ ವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು, ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ನೀಡಿದೆ. ನ್ಯಾಯಾಲಯದ ಈ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತ ನನ್ನ ಧನ್ಯವಾದ ಸಲ್ಲಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ ಎಂದು ಬರೆದಿದ್ದಾರೆ .

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!