ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ:ಬಸ್‌ಗೆ ಬೆಂಕಿ, 10 ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್‌ಗೆ ಬೆಂಕಿಯ ಕೆನ್ನಾಲಿಗೆ ಆವರಿಸಿ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಾಸಿಕ್-ಔರಂಗಾಬಾದ್ ರಸ್ತೆಯ ನಂದೂರ್ನಾಕದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಅಪಘಾತವನ್ನು ಉಪ ಪೊಲೀಸ್ ಆಯುಕ್ತ ಅಮೋಲ್ ತಾಂಬೆ ಖಚಿತಪಡಿಸಿದ್ದು, ಈ ಬಸ್ ಯವತ್ಮಾಲ್ ನಿಂದ ಮುಂಬೈಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ.

ಶನಿವಾರ ಬೆಳಗಿನ ಜಾವ 4:20ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಂಟೈನರ್ ಗೆ ಡಿಕ್ಕಿ ಹೊಡೆದ ಬೆಂಕಿ ಹೊತ್ತಿಕೊಂಡಿದೆ ಎಂದು ಗೊತ್ತಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾನೆ ಪ್ರಯಾಣಿಕರು ಗಾಢ ನಿದ್ದೆಯಲ್ಲಿದ್ದಾಗ ಈ ಅವಘಡ ಸಂಭವಿಸಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದರು.

ಬೆಳಗಿನ ಜಾವ ಮತ್ತೊಂದು ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತುಕೊಂಡಿದೆ. ಇದನ್ನು ಗಮನಿಸುವ ಮುನ್ನವೇ ಬೆಂಕಿ ಜ್ವಾಲೆ ಬಸ್‌ ಪೂರ್ತಿ ಪಸರಿಸಿದೆ. ಕಿಟಕಿಯಿಂದ ಹಾರಿ ನನ್ನ ಪ್ರಾಣ ಉಳಿಸಿಕೊಂಡಿದ್ದೇನೆ ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರಲು ಇಪ್ಪತ್ತು ನಿಮಿಷ ಬೇಕಾಯಿತು ಅಷ್ಟರಲ್ಲಾಗಲೇ ಬಸ್‌ ಪೂರ್ತಿ ಸುಟ್ಟು ಕರಕಲಾಗಿತ್ತು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!