Saturday, September 23, 2023

Latest Posts

ದೇಶದಲ್ಲಿ 15-18 ವರ್ಷ ವಯಸ್ಸಿನ 2 ಕೋಟಿ ಮಕ್ಕಳಿಗೆ ಕೊರೋನಾ ಲಸಿಕೆಯ ಮೊದಲ ಡೋಸ್​ ಪೂರ್ಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಕೊರೋನಾ ವಿರುದ್ಧ ಹೋರಾಡಲು 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಜನವರಿ 3ರಿಂದ ಲಸಿಕಾ ಅಭಿಯಾನ ಆರಂಭವಾಗಿದ್ದು, ಈವರೆಗೆ ಒಟ್ಟು 2 ಕೋಟಿ ಮಕ್ಕಳು ಮೊದಲ ಡೋಸ್​ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

 

ಇದರ ಜೊತೆಗೆ ಜ. 16, 2021 ರಂದು ಪ್ರಾರಂಭವಾದ ‘ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಈವರೆಗೆ ಒಟ್ಟು 150.06 ಕೋಟಿ ಜನರಿಗೆ ಲಸಿಕೆ ಡೋಸ್‌ಗಳನ್ನು ಯಶಸ್ವಿಯಾಗಿ ನೀಡಿದೆ ಎಂದು ಅವರು ಮಾಹಿತಿ ನೀಡಿದರು.
ಇವುಗಳ ನಡುವೆ ಕೇಂದ್ರ ಸರ್ಕಾರ ಆರೋಗ್ಯ ಕಾರ್ಯಕರ್ತರು ಮತ್ತು ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡಲು ಯೋಜನೆ ರೂಪಿಸಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!