ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕಳೆದ 6 ತಿಂಗಳಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲೆಂಡಿನಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವಆರೋಗ್ಯ ಇಲಾಖೆ, ಕೊರೋನಾದಿಂದ ಮೃತಪಟ್ಟ ಮಹಿಳೆಗೆ 90 ವರ್ಷ ವಯಸ್ಸಾಗಿದ್ದು, ಹಲವು ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದಿದೆ.
ಇದುವರೆಗೂ ದೇಶದಲ್ಲಿ 20 ಹೊಸ ಕೊರೋನಾಪ್ರಕರಣಗಳನ್ನು ದೇಶ ದಾಖಲಿಸಿದೆ. ಎಲ್ಲಾ ರೋಗಿಗಳು ಆಕ್ಲೆಂಡ್ ನಗರದ ನಿವಾಸಿಗಳು.
ಕಳೆದ ತಿಂಗಳು ದಿನಕ್ಕೆ 80 ಹೊಸ ಪ್ರಕರಣಗಳು ದಾಖಲಾಗುತ್ತಿದ್ದವು. ಕಠಿಣ ಲಾಕ್ ಡೌನ್ ನಿಯಮಾವಳಿಯಿಂದಾಗಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಈಗ ದಿನಕ್ಕೆ ಸರಾಸರಿ 20 ಪ್ರಕರಣಗಳು ಪತ್ತೆಯಾಗುತ್ತಿವೆ.