KANTARA CHAPTER 1 | ‘ಕನಕವತಿ’ಯ ಮೊದಲ ನೋಟ ಇಂದು ಕನ್ನಡಿಗರ ಕಣ್ಮುಂದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಿರ್ದೇಶಿಸಿರುವ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಚಿತ್ರದಲ್ಲಿ ನಟಿ ರುಕ್ಮಿಣಿ ವಸಂತ್ ಕನಕವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಈ ಶುಭದಿನದಂದು, ಚಿತ್ರತಂಡವು ಅವರ ಮೊದಲ ನೋಟವನ್ನು ಅನಾವರಣಗೊಳಿಸಿದೆ.

ನಾಯಕ ನಟ ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಿದ್ದ ಅವರ ಫಸ್ಟ್‌ಲುಕ್ ಮತ್ತು ನಂತರ ಬಂದ ಶೂಟಿಂಗ್ ಮುಕ್ತಾಯದ ವೀಡಿಯೋಗಳು ಈಗಾಗಲೇ ಭಾರೀ ಕುತೂಹಲ ಮೂಡಿಸಿವೆ. ಇದೀಗ ‘ಕನಕವತಿ’ಯ ಪಾತ್ರದ ಪರಿಚಯ, ಚಿತ್ರದ ಕುರಿತಾದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

Image
ಚಿತ್ರದಲ್ಲಿನ ಅದ್ಭುತ ದೃಶ್ಯ ವೈಭವಕ್ಕೆ ಅರವಿಂದ್ ಎಸ್. ಕಶ್ಯಪ್ ಅವರ ಛಾಯಾಗ್ರಹಣ ಮತ್ತು ಬಿ. ಅಜನೀಶ್ ಲೋಕನಾಥ್ ಅವರ ಸಂಗೀತ ಜೀವ ತುಂಬಲಿದೆ. ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್, ಸದಾ ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಮತ್ತು ಭಾವನಾತ್ಮಕ ಕಥೆಗಳನ್ನು ಹೇಳುವ ತನ್ನ ಬದ್ಧತೆಯನ್ನು ಈ ಚಿತ್ರದ ಮೂಲಕ ಮತ್ತೊಮ್ಮೆ ಪ್ರದರ್ಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!