ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಫಸ್ಟ್​ ಪಿಯು ವಿದ್ಯಾರ್ಥಿನಿ: ಮಗು ಕರುಣಿಸಿದತನಿಗೆ ಹುಡುಕಾಟ ಶುರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಪ್ರಾಪ್ತ ಬಾಲಕಿ ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಅಪ್ರಾಪ್ತೆಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಮಹಿಳಾ ಪೊಲೀಸರು ಬಾಲಕಿ ಸ್ಥಿತಿಗೆ ಕಾರಣನಾದ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಏನಿದು ಘಟನೆ?
ಪೊಲೀಸರಿಗೆ ಸಿಕ್ಕ ಪ್ರಾಥಮಿಕ ಮಾಹಿತಿ ಪ್ರಕಾರ, ಬಾಲಕಿಯು ಯುವಕನೊಂದಿಗೆ ಪ್ರೀತಿಯಲ್ಲಿದ್ದಳು. ಆದ್ರೆ ಆತ ಅದೇ ಕಾಲೇಜಿನ ಯುವಕನಾ ಅಥವಾ ಹೊರಗಿನವನಾ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಬಾಲಕಿ ಸ್ಥಿತಿ ಕಾರಣನಾದ ಯುವಕನಿಗಾಗಿ ಹುಟುಕಾಟ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!