ಇದೇ ತಿಂಗಳು ಬೆಂಗಳೂರಿಗೆ ಬರಲಿದೆ ನಮ್ಮ ಮೆಟ್ರೋ ಹಳದಿ ಮಾರ್ಗದ ಮೊದಲ ರೈಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಆರ್​​ವಿ ರೋಡ್​-ಬೊಮ್ಮಸಂದ್ರ ನಮ್ಮ ಮೆಟ್ರೋ ಹಳದಿ ಮಾರ್ಗ  ಕಾರ್ಯಾಚರಣೆ ವಿಳಂಬವಾಗುತ್ತಿರುವುದಕ್ಕೆ ಜನರು ನಿರಾಶೆಗೊಂಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಹಳದಿ ಮಾರ್ಗ ಉದ್ಘಾಟನೆ ವಿಳಂಬಕ್ಕೆ ಕಾರಣ ನೀಡಿದ್ದಾರೆ. ಹಾಗೇ, ಹಳದಿ ಮಾರ್ಗ ಆರಂಭದ ವಿಚಾರವಾಗಿಯೂ ಮಾಹಿತಿ ನೀಡಿದ್ದಾರೆ. ಈ ಕುರಿತು ಸಮಾಜಿಕ ಜಾಲತಾಣದ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ ಅವರು, ರೈಲುಗಳ ಅಲಭ್ಯತೆಯೇ ಕಾರ್ಯಾಚರಣೆ ವಿಳಂಬಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ.

ಮುಂದುವರೆದು, ರೈಲು ತಯಾರಿಕೆಯನ್ನು ತ್ವರಿತಗೊಳಿಸಲು ನಾನು ರೈಲು ತಯಾರಕರಾದ ತೀತಗಢ್​ ರೈಲ್​ ಸಿಸ್ಟಮ್ಸ್​ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಈಗ ಜನವರಿ 6 ರಂದು ಬೆಂಗಳೂರಿಗೆ ಮೊದಲ ರೈಲು ಬರಲಿದೆ. ಜನವರಿ ಅಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಎರಡನೇ ರೈಲು ಮತ್ತು ಏಪ್ರಿಲ್​ನಲ್ಲಿ ಮೂರನೇ ರೈಲು ಬೆಂಗಳೂರಿಗೆ ತಲುಪಲಿದೆ ಎಂದು ಹೇಳಿದರು.

ಬಳಿಕ ತಿಂಗಳಿಗೆ 1 ರೈಲು, ಸೆಪ್ಟೆಂಬರ್​ ವೇಳೆಗೆ ತಿಂಗಳಿಗೆ 2 ರೈಲುಗಳು ಆಗಮಿಸಲಿವೆ. ಜನವರಿ 6 ರಂದು ತೀತಗಢ್​ ರೈಲ್​ ಸಿಸ್ಟಮ್ಸ್​ ಘಟಕಕ್ಕೆ ತೆರಳಿ ಪರಿಶೀಲನೆ ನಡೆಸುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆ ಸಚಿವರು ಮನವಿ ಮಾಡಿದ್ದೇನೆ. ಇದೇ ವೇಳೆ ಬೆಂಗಳೂರಿಗೆ ಬರಲಿರುವ ಮೆಟ್ರೋ ರೈಲುಗಳಿಗೆ ಸಚಿವರು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!