ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ವೇಳೆ ಗರಿ ಗರಿ ನೋಟಿನ ಸದ್ದು ಹೆಚ್ಚಾಗಿ ಕೇಳಿಬರುತ್ತಿದೆ. ದಾಖಲೆಗಳು ಇಲ್ಲದ ಕಂತೆ ಕಂತೆ ನೋಟುಗಳ ಸಂಖ್ಯೆ ಹೆಚ್ಚಾಗಿದೆ. ಕಡೂರಿನ ಬಸವದಿಬ್ಬೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.5 ಲಕ್ಷ ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಡೂರಿನ ಬಸವದಿಬ್ಬೆ ತಪಾಸಣಾ ಕೇಂದ್ರದಲ್ಲಿ ವಾಹನ ತಪಾಸಣೆ ವೇಳೆ ಹಣ ಪತ್ತೆಯಾಗಿದೆ. ಯಾವುದೇ ದಾಖಲೆಗಳಿಲ್ಲದೆ ಸುಮಾರು 1.5 ಲಕ್ಷ ಹಣ ಸಾಗಿಸಲಾಗಿದೆ. ಕೂಡಲೇ ಹಣವನ್ನು ಜಪ್ತಿ ಮಾಡಲಾಗಿದ್ದು. ಕಡೂರು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.