ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಅಂತ್ಯಕ್ರಿಯೆ ಸ್ವಗ್ರಾಮ ಕುಂದೂರಿನ ತೋಟದಲ್ಲಿ ನೆರವೇರಿತು.
ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದ್ದು, ಈ ವೇಳೆ ಶಾಸಕ ರೇಣುಕಾಚಾರ್ಯ, ಹಾಗೂ ಕುಟುಂಬದವರು, ಗೃಹ ಸಚಿವ ಆರಗ ಜ್ಞಾನೇಂದ್ರ, ಹೊನ್ನಾಳಿ ಹಿರೇಕಲ್ಮಠದ ಡಾ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ಹೊನ್ನಾಳಿಯ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದರು. ನಂತರ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿತ್ತು, ಚಂದ್ರಶೇಖರ್ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಕಾರಿನ ಹಿಂಬದಿ ಸೀಟ್ ನಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿತ್ತು.