ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ದಲಿತ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಅವರು ಕೊರೋನಾ ಸೋಂಕಿನಿಂದ ನಿಧನರಾಗಿದ್ದು, ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಬೆಂಗಳೂರು ಜ್ಞಾನಭಾರತಿ ಕ್ಯಾಂಪಸ್ ಬಳಿಯ ಕಲಾಗ್ರಾಮದ ಜಿ.ಎಸ್ ಶಿವರುದ್ರಪ್ಪ ಅವರ ಸಮಾಧಿ ಬಳಿ ಅಂತ್ಯಸಂಸ್ಕಾರ ನೆರವೇರಲಿದೆ. ಬೌದ್ಧಧರ್ಮದ ವಿಧಿವಿಧಾನಗಳಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಬೆಳಗ್ಗೆ8 ರಿಂದ 10ಗಂಟೆವರೆಗೆ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ.
ದರ್ಶನದ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನಡೆಸಲಾಗುವುದು.