ಭವಿಷ್ಯ ನಿಂತಿರುವುದು ಯುದ್ಧದಲ್ಲಿ ಅಲ್ಲ, ಬುದ್ಧನಲ್ಲಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಒಡಿಶಾದ ಭುವನೇಶ್ವರದಲ್ಲಿ ಪ್ರವಾಸಿ ಭಾರತೀಯ ದಿವಸ ಸಮಾವೇಶವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ವಲಸಿಗರನ್ನು ಭಾರತದ ರಾಯಭಾರಿ ಎಂದು ಯಾವಾಗಲೂ ಪರಿಗಣಿಸುವುದಾಗಿ ಹೇಳಿದರು.

ತನ್ನ ಪರಂಪರೆಯ ಬಲದಿಂದ ಜಗತ್ತಿನ ಭವಿಷ್ಯವು ನಿಂತಿರುವುದು ಯುದ್ಧದಲ್ಲಿ ಅಲ್ಲ, ಬುದ್ಧನಲ್ಲಿ ಎಂದು ಹೇಳಲು ಭಾರತಕ್ಕೆ ಸಾಧ್ಯವಿದೆ ಎಂದು ಪಿಎಂ ಮೋದಿ ಹೇಳಿದರು.

ಇಂದು ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, ನಿಮ್ಮ ಅನುಕೂಲತೆ ಮತ್ತು ಸೌಕರ್ಯಕ್ಕೆ ನಾವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ. ನಿಮ್ಮ ಸುರಕ್ಷತೆ ಮತ್ತು ಕಲ್ಯಾಣವು ನಮ್ಮ ಪ್ರಮುಖ ಆದ್ಯತೆಯಾಗಿದೆ.

ಬಿಕ್ಕಟ್ಟಿನ ಸಂದರ್ಭಗಳಲ್ಲಿ, ನಮ್ಮ ವಲಸಿಗರಿಗೆ ಸಹಾಯ ಮಾಡುವುದು ನಮ್ಮ ಜವಾಬ್ದಾರಿ ಎಂದು ನಾವು ಪರಿಗಣಿಸುತ್ತೇವೆ. ಇದು ಇಂದಿನ ಭಾರತದ ವಿದೇಶಾಂಗ ನೀತಿಯ ಮಾರ್ಗದರ್ಶಿ ತತ್ವಗಳಲ್ಲಿ ಒಂದಾಗಿದೆ ಎಂದು ಹೇಳಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!