ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಬೇಗುಸರಾಯ್‍ನಲ್ಲಿ ಗಂಡಕ್ ನದಿನಲ್ಲಿ ನಿರ್ಮಿಸಲಾಗಿದ್ದ 13 ಕೋಟಿ ರೂ. ವೆಚ್ಚದ 206 ಮೀಟರ್ ಉದ್ದದ ಬ್ರಿಡ್ಜ್ ಉದ್ಘಾಟನೆ ಮುನ್ನ ಕುಸಿದು ಬಿದ್ದಿದೆ.
ಭಾನುವಾರ ಬೆಳಗ್ಗೆಗಂಡಕ್ ನದಿ ಬಳಿ ನಿರ್ಮಿಸಲಾಗಿದ್ದ ಬ್ರಿಡ್ಜ್ ಮುಂಭಾಗ ಕುಸಿದು ನದಿ ಪಾಲಾಗಿದೆ.
2016ರಲ್ಲಿ ಮುಖ್ಯಮಂತ್ರಿ ನರ್ಬಾಡ್ ಯೋಜನೆಯಡಿಯಲ್ಲಿ ಈ ಬ್ರಿಡ್ಜ್ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಆ ಬಳಿಕ 2017ರಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ ಉದ್ಘಾಟನೆಗೊಂಡಿರಲಿಲ್ಲ ). ಆ ಬಳಿಕ ಕೆಲದಿನಗಳ ಹಿಂದೆ ಸೇತುವೆಯ ಮೇಲ್ಭಾಗದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಇಂದು ಬೆಳಗ್ಗೆ ಕುಸಿದು ಬಿದ್ದಿದೆ.
ಕೆಲ ತಿಂಗಳ ಹಿಂದೆ ಗುಜರಾತ್‍ನ ಮೊರ್ಬಿಯಲ್ಲಿ ಉದ್ಘಾಟನೆಗೊಂಡು 5 ದಿನಗಳಾಗಿದ್ದ ಕೇಬಲ್ ಸೇತುವೆ ಕುಸಿತಗೊಂಡು ಹಲವು ಸಾವು-ನೋವುಗಳು ಸಂಭವಿಸಿತ್ತು.