ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಗಾಂಧಿ ಕುಟುಂಬಕ್ಕೆ ಲಾಭವಾಗಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಇಡಿ ಸಲ್ಲಿಸಿರುವ ಆರೋಪಪಟ್ಟಿಯ ಯಾವುದೇ ವಿಚಾರಗಳಿಗೆ ಸರಿಯಾದ ಆಧಾರವಿಲ್ಲ. ಇದು ಅನ್ಯಾಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿರುವ ಬಗ್ಗೆ ಉತ್ತರಿಸಿದ ಅವರು, ಪ್ರಕರಣದಲ್ಲಿ ಯಾವುದೇ ರೀತಿಯಲ್ಲಿಯೂ ಗಾಂಧಿ ಕುಟುಂಬಕ್ಕೆ ಲಾಭವಾಗಿಲ್ಲ. ಇದು ಕಾಂಗ್ರೆಸ್ ಪಕ್ಷದ ಆಸ್ತಿ ಮತ್ತು ಅವರು ಪಕ್ಷದ ಮುಖ್ಯಸ್ಥರು, ಆದ್ದರಿಂದ ಅವರ ಹೆಸರು ಉಲ್ಲೇಖವಾಗಿದೆ. ಇದರಲ್ಲಿ ತಪ್ಪೇನಿದೆ? ಇದನ್ನು ಕೇವಲ ರಾಜಕೀಯ ದ್ವೇಷಕ್ಕಾಗಿ ಮಾಡಲಾಗುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!