Wednesday, August 10, 2022

Latest Posts

ಗಣೇಶೋತ್ಸವ ಆಚರಣೆ; ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಪಾಲಿಸಿ: ಎಂ.ಕೆ.ಪ್ರಾಣೇಶ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಈ ವಿಚಾರದಲ್ಲಿ ಜಿಲ್ಲಾಡಳಿತದೊಂದಿಗೆ ಸಂಘರ್ಷಕ್ಕಿಳಿಯಬಾರದು ಎಂದು ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಮನವಿ ಮಾಡಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಸಂದರ್ಭದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲು ಸಾಧ್ಯವಿರುವುದಿಲ್ಲ. ಎಲ್ಲರ ಬದುಕು ಮುಖ್ಯ, ಬದುಕಿದ್ದರೆ ಏನನ್ನು ಬೇಕಾದರೂ ಮಾಡಬಹುದು ಎಂದು ಹೇಳಿದರು.
5 ದಿನಗಳ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡಿತ್ತು. ಇದೀಗ ಬೆಂಗಳೂರು ನಗರಪಾಲಿಕೆ ವ್ಯಾಪ್ತಿಯಲ್ಲಿ 3 ದಿನಕ್ಕೆ ಸೀಮಿತಗೊಳಿಸಿದೆ. ಈ ನಡುವೆ ಸಾರ್ವಜನಿಕರು ಕನಿಷ್ಟ 7 ಅಥವಾ 11 ದಿನಗಳ ಉತ್ಸವಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡುತ್ತಿದ್ದಾರೆ. ಈ ಸಂಬಂಧ ತಾವು ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕನಿಷ್ಠ 7 ದಿನಗಳ ಉತ್ಸವಕ್ಕೆ ಅವಕಾಶ ನೀಡಬೇಕು ಎಂದು ಕೋರಿದ್ದೇವೆ. ಆದರೆ ಈ ವಿಚಾರದಲ್ಲಿ ಸ್ಥಳೀಯವಾಗಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಸರ್ಕಾರ ತಮಗೆ ನೀಡಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದರು.
ಈ ಹಿನ್ನೆಲೆಯಲ್ಲಿ ನಾವು ನಾಳೆ ವರೆಗೆ ಸರ್ಕಾರದೊಂದಿಗೆ ಪ್ರಯತ್ನ ನಡೆಸುತ್ತೇವೆ. ಕನಿಷ್ಠ 7 ದಿಗಳ ವರೆಗೆ ಎಲ್ಲಾ ರೀತಿಯ ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಉತ್ಸವಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ಈ ನಡುವೆ ಪಕ್ಕದ ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿವೆ. ನಮ್ಮ ರಾಜ್ಯ ಸರ್ಕಾರವು 3ನೇ ಅಲೆ ನಿಯಂತ್ರಿಸುವ ಕಡೆ ಹೆಚ್ಚಿನ ಗಮನ ಹರಿಸಿದೆ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದೆ ಸರ್ಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕಾಗುತ್ತದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss