ಸ್ಮಶಾನದಲ್ಲಿ ಇರಬೇಕಾದ ಪಿಶಾಚಿಗಳು ಊರೊಳಗೆ ಬಂದಿವೆ: ಇಷ್ಟುಕ್ಕೂ ಪಿಶಾಚಿ ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಎಲ್ಲೆಲ್ಲಿ ಹೋರಾಟ ನಡೆಸುತ್ತಿದೆಯೋ ಆ ಸ್ಥಳಗಳಲ್ಲಿ ವಕ್ಫ್ ಬೋರ್ಡ್ ನೀಡಿದ ನೋಟೀಸ್​ಗಳನ್ನು ವಾಪಸ್ಸು ಪಡೆಯಲಾಗುತ್ತಿದೆ, ಸ್ಮಶಾನದಲ್ಲಿ ಇರಬೇಕಾದ ಪಿಶಾಚಿಗಳು ಊರೊಳಗೆ ಬಂದಿವೆ, ಅವುಗಳನ್ನೆಲ್ಲ ವಾಪಸ್ಸು ಸ್ಮಶಾನಕ್ಕೆ ಓಡಿಸಬೇಕಾಗಿದೆ ಎಂದು ಆರ್.ಅಶೋಕ್ ಕಿಡಿಕಾರಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಕಂದವಾರದಲ್ಲಿ ವಕ್ಫ್ ಬೋರ್ಡ್ ತನ್ನ ಆಸ್ತಿಯೆಂದು ಮಸೀದಿ ಮತ್ತು ದರ್ಗಾ ಕಟ್ಟಿಸಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತಾಡಿದ ವಿರೋಧ ಪಕ್ಷದ ನಾಯಕ, ಇಲ್ಲಿ ವಕ್ಫ್ ಮಂಡಳಿಯ ದುರಹಂಕಾರ ಎದ್ದು ಕಾಣುತ್ತಿದೆ. ಸರ್ಕಾರಿ ಶಾಲೆಯ ನೆರಳಿನಲ್ಲಿ ಮಸೀದಿ ಕಟ್ಟಿಸಿ ಸರ್ಕಾರ ಮೌನಕ್ಕೆ ಶರಣಾಗುತ್ತದೆ ಎಂದರೆ ಸಿದ್ದರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ.

ರೈತರ ಪಹಣಿಗಳಲ್ಲಿ ವಕ್ಫ್ ಅಂತ ನಮೂದಾಗಿರುವುದನ್ನು ಅಳಿಸುವವರೆಗೆ. ಗೆಜೆಟ್ ನೋಟಿಫಿಕೇಶನ್ ಹಿಂಪಡೆಯುವವರೆಗೂ ಹೋರಾಟ ಮುಂದುವರಿಸುತ್ತೇವೆ ಬಿಜೆಪಿ ವಿರಮಿಸುವುದಿಲ್ಲ ಎಂದು ಖಡಕ್ ಮಾತನಾಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!