Friday, October 3, 2025

ಚಿನ್ನದಂಬಾರಿಯಲ್ಲಿ ನಾಡ ಅಧಿದೇವತೆ ವಿರಾಜಮಾನ: ಅಭಿಮನ್ಯು ಮೇಲೆ ಅಂಬಾರಿ.. ಸಾಗುತ್ತಿದೆ ಸವಾರಿ!!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಕ್ಷಾಂತರ ಜನರು ಕಾತುರದಿಂದ ಕಾದಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಅದ್ದೂರಿ ಚಾಲನೆ ಸಿಕ್ಕಿದೆ.

ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡ ಅಧಿದೇವತೆ ಚಾಮುಂಡಿತಾಯಿಯನ್ನು ಹೊತ್ತು 6ನೇ ಬಾರಿ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ.

ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಧನಂಜಯ ಹೆಜ್ಜೆ ಹಾಕಿದರೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪ, ನೌಫತ್‌ ಆನೆಯಾಗಿ ಗೋಪಿ, ಪಟ್ಟದ ಆನೆಯಾಗಿ ಶ್ರೀಕಂಠ ಮತ್ತು ಲಕ್ಷ್ಮಿ ಹೆಜ್ಜೆ ಹಾಕುತ್ತಿವೆ. ಸಾಲಾನೆಯಾಗಿ ಮಹೇಂದ್ರ, ಭೀಮ, ಕಂಜನ್, ಏಕಲವ್ಯ, ಪ್ರಶಾಂತ, ಸುಗ್ರೀವ, ಹೇಮಾವತಿ ಈ ಆನೆಗಳು ಅಭಿಮನ್ಯುವಿಗೆ ಸಾಥ್‌ ನೀಡುತ್ತಿವೆ.