Thursday, July 7, 2022

Latest Posts

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಗ್ರೀನ್ ಸಿಗ್ನಲ್

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿಧಾನಸಭೆಯಲ್ಲಿ ಅಂಗೀಕಾರಗೊಂಡು, ಪರಿಷತ್ ನಲ್ಲಿ ಅಂಗೀಕಾರಗೊಳ್ಳದೇ ಇದ್ದಂತ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಈ ಮೂಲಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಶೀಘ್ರವೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳ್ಳಲಿದೆ.
ಈ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ , ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಗೆ ತರೋದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದು ಮಧ್ಯಾಹ್ನ 12ಕ್ಕೆ ವಿಧಾನಸೌಧದಲ್ಲಿ ನಡೆದಂತ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ಕಾಯ್ದೆ ಕುರಿತಂತೆ ಚರ್ಚಿಸಲಾಯಿತು. ಅಲ್ಲದೇ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತರುವ ಕಡತಕ್ಕೂ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಶೀಘ್ರವೇ ಮತಾಂತರ ನಿಷೇಧ ಕಾಯ್ದೆ ಜಾರಿಗೊಳ್ಳಲಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss